May 18, 2026
WhatsApp Image 2026-04-22 at 9.01.08 AM

ವಿಟ್ಲ: ಕೊಳ್ನಾಡು ಗ್ರಾಮದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಕೊಡುಗೆಯಾಗಿ ಕಾಡುಮಠ ಬಸ್ತಿಗುಂಡಿಯ ಹಳೆಯ ಕಿಂಡಿ ಆಣೆಕಟ್ಟನ್ನು 36 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿ ಸ್ಥಳೀಯ ಜನರ ದೀರ್ಘಕಾಲದ ಬೇಡಿಕೆಯಾಗಿದ್ದು, ಇದೀಗ ಅನುಷ್ಠಾನದ ಹಂತಕ್ಕೆ ಬಂದಿರುವುದು ಸಂತಸದ ಸಂಗತಿಯಾಗಿದೆ.

ಕಾಡುಮಠ–ಕುಡ್ತಮುಗೇರು–ಕುದ್ರಿಯಾ ಭಾಗದ ರೈತರಿಗೆ ಅನುಕೂಲವಾಗುವಂತೆ ಹಳೆಯ ಮರದ ಹಲಗೆಯನ್ನು ಬದಲಾಯಿಸಿ, ಆಧುನಿಕ ತಂತ್ರಜ್ಞಾನದೊಂದಿಗೆ ಕಬ್ಬಿಣ ಹಾಗೂ ಪೈಬರ್ ಹಲಗೆಯನ್ನು ಅಳವಡಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ನೀರಿನ ನಿಯಂತ್ರಣ ಸುಧಾರಿಸಿ, ಕೃಷಿಗೆ ಅಗತ್ಯವಾದ ನೀರಾವರಿ ವ್ಯವಸ್ಥೆ ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮೂಲಕ ಕೊಳ್ನಾಡು ಕಾಂಗ್ರೆಸ್ ವಲಯಾಧ್ಯಕ್ಷರಾದ ಪವಿತ್ರ ಪೂಂಜಾ ಅವರ ಕೋರಿಕೆಯಂತೆ ಶಾಸಕ ಮಂಜುನಾಥ ಭಂಡಾರಿಯವರಿಗೆ ಸಣ್ಣ ನೀರಾವರಿ ಯೋಜನೆಯ ಹಲವು ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಅವುಗಳಲ್ಲಿ ಮೊದಲ ಹಂತವಾಗಿ ಕಾಡುಮಠ ಬಸ್ತಿಗುಂಡಿ ಕಿಂಡಿ ಆಣೆಕಟ್ಟು ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದ್ದು, ಉಳಿದ ಕಾಮಗಾರಿಗಳನ್ನು ಹಂತಹಂತವಾಗಿ ಪೂರ್ಣಗೊಳಿಸುವುದಾಗಿ ಶಾಸಕರು ತಿಳಿಸಿದ್ದಾರೆ.

ಅನಾಥ ಪ್ರಜ್ಞೆ ದೂರ ಮಾಡಿ ಅಭಿವೃದ್ಧಿ ಕಾರ್ಯಗಳು: ನಾಯಕರಿಗೆ ನಾಗರೀಕರಿಂದ ಪ್ರಶಂಸೆ

ಕಳೆದ ಎಂಟು ವರ್ಷಗಳಿಂದ ಕಾಂಗ್ರೆಸ್ ಶಾಸಕರು ಇಲ್ಲದ ಪರಿಸ್ಥಿತಿಯಲ್ಲಿಯೂ, ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿವೃದ್ಧಿಯ ಕೊರತೆ ಉಂಟಾಗದಂತೆ ರಸ್ತೆ, ನೀರು, ದಾರಿದೀಪ, ಆರೋಗ್ಯ, ಶಿಕ್ಷಣ ಹಾಗೂ ನೀರಾವರಿ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳನ್ನು ಇಚ್ಚಾಶಕ್ತಿಯಿಂದ ಈಡೇರಿಸುತ್ತಿರುವ ನಾಯಕರ ಕಾರ್ಯವೈಖರಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಯೋಜನೆಗೆ ಕೊಳ್ನಾಡು ಪ್ರದೇಶದ ರೈತ ಬಂಧುಗಳು ಸೇರಿದಂತೆ ನೀರಿನ ಫಲಾನುಭವಿಗಳು ಹಾಗೂ ನಾಗರಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.

About The Author

Leave a Reply