

ಮಂಗಳೂರು: ಮಂಗಳೂರು ನಗರದಲ್ಲಿ ಪ್ರಸ್ತುತ ಶಾಂತಿ ಸುವ್ಯವಸ್ಥೆ ನೆಲೆಸಿದ್ದು, ಯಾವುದೇ ಕಾರಣಕ್ಕೂ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ರಿಯಾಜ್ ಹರೇಕಳ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಈಗ ಪರಿಸ್ಥಿತಿ ಚೆನ್ನಾಗಿದೆ. ಜೂಜಾಟ, ವೇಶ್ಯಾವಾಟಿಕೆ, ಡ್ರಗ್ಸ್, ಗಾಂಜಾ ದಂಧೆ, ರೌಡಿಸಂ, ಹಫ್ತಾ ವಸೂಲಿ ಮೊದಲಾದ ಕಮಿನಲ್ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಶಾಂತಿ ಕಾಪಾಡಲು ಸುಧೀರ್ ಕುಮಾರ್ ರೆಡ್ಡಿ ಅವರಂತಹ ದಕ್ಷ ಐಪಿಎಸ್ ಅಧಿಕಾರಿಗಳ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ರಾಜಕಾರಣಿಗಳು ಮತ್ತು ಪುಡಾರಿಗಳು ಆಯುಕ್ತರ ವರ್ಗಾವಣೆಗೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಇದಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಮಂಗಳೂರಿನ ನಾಗರಿಕರಿಗೆ ಶಾಂತಿ, ನೆಮ್ಮದಿಯ ವಾತಾವರಣ ಬೇಕಾಗಿದೆ. ಅದನ್ನು ಕಾಪಾಡುವ ಅಧಿಕಾರಿಗಳು ಇಲ್ಲೇ ಮುಂದುವರಿಯಬೇಕು ಎಂದು ರಿಯಾಜ್ ಹರೇಕಳ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಡಿಜಿಪಿ ಸಲೀಂ ಅವರೂ ಮಂಗಳೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿದೆ, ಅದು ಮುಂದುವರಿಯಬೇಕು” ಎಂದು ಹೇಳಿದ್ದರು. ಆ ನಿಟ್ಟಿನಲ್ಲಿ ಪ್ರಸ್ತುತ ಇರುವ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಕಾರ್ಯವೈಖರಿ ಮುಂದುವರೆಯುವುದು ನಗರದ ಹಿತದೃಷ್ಟಿಯಿಂದ ಅಗತ್ಯ ಎಂದು ಹರೇಕಳ ಅಭಿಪ್ರಾಯಪಟ್ಟಿದ್ದಾರ






