April 23, 2026
WhatsApp Image 2026-04-23 at 1.59.02 PM

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.ಹಲ್ಲೆಯನ್ನು ತಡೆಯಲು ಬಂದ ಸ್ನೇಹಿತರಿಗೂ ಬೆದರಿಕೆ ಹಾಕಿದ್ದಾರೆ. ಸಾರ್ವಜನಿಕರು ಜಮಾಯಿಸುತ್ತಿದ್ದಂತೆ, ಆದಿಲ್‌ಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮೊಯಿನುದ್ದೀನ್ ಮತ್ತು ತಂಡ ಹೊಡೆಯುತ್ತಿದ್ದಾಗ ಆದಿಲ್ ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಈಗ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗಾಯಗೊಂಡ ಆದಿಲ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2026 ರಂತೆ, ಬಿ.ಎನ್.ಎಸ್ (BNS 2023) ಕಾಯ್ದೆಯ ವಿವಿಧ ಕಲಂಗಳು ಸೇರಿದಂತೆ ಜೀವಬೆದರಿಕೆ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply