April 24, 2026
WhatsApp Image 2026-04-24 at 10.11.56 AM

ಚುರು: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ಭಾಗವಹಿಸಿ ಪಿಲಾನಿಯಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಎರಡೂ ವಾಹನಗಳಿಗೂ ಕ್ಷಣದಲ್ಲಿ ಬೆಂಕಿ ತಗುಲಿತ್ತು. ಗಾಯಗೊಂಡ ಐದು ಜನರನ್ನು ನಂತರ ಪಿಲಾನಿಯ ಬಿರ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಈಗ ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೈಪುರದ ಮತ್ತೊಂದು ಆಸ್ಪತ್ರೆಗೆ ಕಳುಹಿಸಲಾಗಿದೆ.

About The Author

Leave a Reply