

ಪುತ್ತೂರು: ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಬಿ.ಎಚ್. ಫೀದಾ ಅವರು 610 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಬಪ್ಪಳಿಗೆ ನಿವಾಸಿಗಳಾದ ಬಿ.ಎಚ್. ಅಬ್ದುಲ್ ಖಾದರ್ ಮತ್ತು ಎಸ್.ಎ. ಖಲೀಲಾ ದಂಪತಿಗಳ ಸುಪುತ್ರಿಯಾಗಿರುವ ಫೀದಾ, ತಮ್ಮ ನಿರಂತರ ಪರಿಶ್ರಮ ಮತ್ತು ಶಿಸ್ತುಬದ್ಧ ಅಧ್ಯಯನದ ಮೂಲಕ ಈ ಸಾಧನೆಯನ್ನು ಮಾಡಿದ್ದಾರೆ. ಅವರ ಈ ಸಾಧನೆ ಶಾಲೆ, ಕುಟುಂಬ ಹಾಗೂ ಊರಿಗೆ ಹೆಮ್ಮೆ ತಂದಿದೆ.

ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿನಿಯ ಸಾಧನೆಯನ್ನು ಅಭಿನಂದಿಸಿದ್ದು, ಮುಂದಿನ ಶಿಕ್ಷಣ ಹಾದಿಯಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.
ಸ್ಥಳೀಯರು ಕೂಡ ಫೀದಾರವರ ಸಾಧನೆಯನ್ನು ಶ್ಲಾಘಿಸಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ.
ವರದಿ: ಅಬ್ದುಲ್ ಖಾದರ್ ಪಾಟ್ರಕೋಡಿ






