May 1, 2026
WhatsApp Image 2026-05-01 at 10.09.41 AM

ನವದೆಹಲಿ: ಇಂದು ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಭಾರಿ ಏರಿಕೆಯ ಬಳಿಕ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ.

ಪೆಟ್ರೋಲ್, ಡೀಸೆಲ್ ಮತ್ತು ದೇಶೀಯ ಸಿಲಿಂಡರ್ ದರ ಸ್ಥಿರ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಸಾರ್ವಜನಿಕರಿಗೆ ನೇರವಾಗಿ ಅನ್ವಯವಾಗುವ ಪ್ರಮುಖ ಇಂಧನ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ದೇಶೀಯ ಎಲ್‌ಪಿಜಿ: ಸುಮಾರು 33 ಕೋಟಿ ಗ್ರಾಹಕರು ಬಳಸುವ 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆಗಳು ಯಥಾಸ್ಥಿತಿಯಲ್ಲಿವೆ.

ಒಟ್ಟು ಬಳಕೆಯ ಶೇಕಡಾ 90 ರಷ್ಟು ಪಾಲನ್ನು ಹೊಂದಿರುವ ವಾಹನ ಸವಾರರಿಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಸೀಮೆಎಣ್ಣೆಯ ಬೆಲೆಗಳು ಕೂಡ ಬದಲಾಗದೆ ಉಳಿದಿವೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1,950– 2,200 ರೂ. ಇತ್ತು.

About The Author

Leave a Reply