May 2, 2026
WhatsApp Image 2026-05-02 at 9.23.09 AM

ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನ ಹೊರ ವರ್ತುಲ ರಸ್ತೆಯಲ್ಲಿ (ORR) ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಂಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಪೆಧಗೋಲ್ಕೊಂಡ ಪ್ರದೇಶದ ಒಆರ್‌ಆರ್ ಎಕ್ಸಿಟ್-16ರಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯ ಹಿಂಭಾಗದಲ್ಲಿ ಸಂಪೂರ್ಣವಾಗಿ ಸಿಲುಕಿಕೊಂಡಿದ್ದು, ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಏಳು ಜನರಿದ್ದರು ಎನ್ನಲಾಗಿದೆ.

About The Author

Leave a Reply