

ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಅಳದಂಗಡಿ ಬೆಟ್ಟದ ತಪ್ಪಲಿನಲ್ಲಿ ಶನಿವಾರ ಸಂಜೆ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹರಡುವ ಆತಂಕ ಎದುರಾಗಿದೆ.
ಅಳದಂಗಡಿ ಪೇಟೆಯಿಂದಲೂ ಬೆಂಕಿಯ ತೀವ್ರವಾಗಿತೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದರಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು.ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಪ್ರಸ್ತುತ ಬೆಂಕಿ ನಂದಿಸಲು ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಅರಣ್ಯ ಇಲಾಖೆಯು ಹಗಲಿರುಳು ಶ್ರಮಿಸುತ್ತಿದೆ ಎಂದು ಡಿಎಫ್‌ಒ ಶಿವರಾಮ್ ಬಾಬು ತಿಳಿಸಿದ್ದಾರೆ.







