May 4, 2026
WhatsApp Image 2026-05-04 at 2.10.23 PM

ಬಾಗಲಕೋಟೆ: ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.

ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಪುತ್ರ ಉಮೇಶ್‌ರನ್ನು ಉಪಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಈ ಗೆಲುವಿನೊಂದಿಗೆ ಬಾಗಲಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ.ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ವಿಜಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಸಹೋದರ ಮಲ್ಲಿಕಾರ್ಜುನ ಮೇಟಿ ಅವರು, “ಇದೊಂದು ಭಾವುಕ ಕ್ಷಣವಾಗಿದ್ದು, ಈ ಗೆಲುವಿನಿಂದ ನಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಕ್ಕ ಹಾಗಾಗಿದೆ. ನಮ್ಮ ತಂದೆ ಕೈ ಹಿಡಿದಿದ್ದ ಜನರು ಈಗ ನಮ್ಮ ಸಹೋದರನ ಕೈಯನ್ನೂ ಹಿಡಿದಿದ್ದಾರೆ. ಸಿಎಂ, ಸಚಿವರು ಮತ್ತು ಮತದಾರರಿಗೆ ಧನ್ಯವಾದ ಹೇಳೋದಾಗಿ” ತಿಳಿಸಿದ್ದಾರೆ.

About The Author

Leave a Reply