May 12, 2026
image (73)

ವಿಟ್ಲ: ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ಕೊನೆಗೂ ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಸರಗೋಡು ಮಂಜೇಶ್ವರ ನಿವಾಸಿ ಸಿದ್ದೀಕ್ ಬಂಧಿತ ಆರೋಪಿ. 1992ರ ಅಕ್ಟೋಬರ್ 14 ರಂದು  ಮಂಜೇಶ್ವರ ನಿವಾಸಿಗಳಾದ ಇಬ್ರಾಹಿಂ ಮತ್ತು ಸಿದ್ದೀಕ್ ಎಂಬುವವರು ಕಾರಿನಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೆಟ್ರೋಲಿಯಂ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದರೂ, ಆರೋಪಿ ಸಿದ್ದೀಕ್ ವಿಚಾರಣೆಗೆ ಹಾಜರಾಗದೆ ಪರಾರಿಯಾಗಿದ್ದನು.

About The Author

Leave a Reply