

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಅಕ್ಷತಾ (8) ಮೃತಪಟ್ಟ ದುರ್ದೈವಿ. ಬಾಲಕಿ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಅಕ್ಷತಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಇತರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಯಾದಗಿರಿಯ ‘ಯೀಮ್ಸ್’ (YIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.







