

ಮಂಗಳೂರು: ಕಂಕನಾಡಿ ಸುವರ್ಣ ಲೈನ್ 6ನೇ ಅಡ್ಡ ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ್ ಕುಮಾರ್ ಸ್ಕೂಟರ್ ಪಾರ್ಕ್ ಮಾಡಿದ್ದರು. ಮರಳಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಕಳವಾದ ಸ್ಕೂಟರನ್ನು ಸುತ್ತಮುತ್ತ ಎಲ್ಲ ಕಡೆ ಹುಡುಕಾಡಿದರೂ ಸ್ಕೂಟರ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.







