May 14, 2026
image - 2026-05-14T102400.546

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ ಸುಮಾರು 2 ಗಂಟೆ ವೇಳೆ ಘಟನೆ ‌ನಡೆದಿದೆ ಎಂದು ಹೇಳಲಾಗಿದೆ.

ಉದ್ಯಾವರ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೋಗಿ ವಾಪಸು ಚಟ್ಟೆಕಲ್ಲು ಮನೆಗೆ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ ಪಲ್ಟಿಯಾಗಿದೆ.

About The Author

Leave a Reply