May 15, 2026
WhatsApp Image 2026-05-15 at 3.52.00 PM

ಮಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ ಹಾವಳಿ ತಡೆಯಲು ಪೊಲೀಸರು ಮತ್ತು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರಿನ ಮೇರಿಹಿಲ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ನಿವಾಸಿ ಇರ್ಷಾದ್ ಬಂಧಿತ ಆರೋಪಿ. ಬಂಧಿತನಿಂದ ಅಂದಾಜು 1.56 ಲಕ್ಷ ರೂ. ಮೌಲ್ಯದ 3.13 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಡ್ರಗ್ ಜಾಲದ ಹಿಂದಿರುವವರ ಪತ್ತೆಗೆ ತನಿಖೆ ಮುಂದುವರಿದಿದೆ.

About The Author

Leave a Reply