May 17, 2026
image - 2026-05-17T175712.745

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ  ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಿದ್ದು ದುರಂತ

ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು ಕಲಿಸಿಕೊಡಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ತೆರಳಿದ್ದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಮೂವರೂ ಕೃಷಿ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.

About The Author

Leave a Reply