May 18, 2026
image - 2026-05-18T123300.420

ಕಾಸರಗೋಡು: ಬ್ಯಾಂಕ್ ಸೆಕ್ಯೂರಿ ಗಾರ್ಡ್ ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಕಾಸರಗೋಡಿನ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಸುರೇಶ್ ( 42) ಕೊಲೆ ಗೀಡಾದವರು. ರವಿವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ.

ಘಟನೆ ಬಗ್ಗೆ ಕಿರಣ್ , ಅಖಿಲೇಶ್ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿ ಕೊಲೆಗೆ ಕಾರಣ ಎನ್ನಲಾಗಿದೆ.ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಆರೋಪಿಗಳು ಸುರೇಶ್ ಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಸುರೇಶ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply