

ನವದೆಹಲಿ: ಕೇಂದ್ರ ಸರಕಾರ ತೈಲೋತ್ಪನ್ನಗಳ ಬೆಲೆ ನಿಯಂತ್ರಿಸುವಲ್ಲಿ ಮತ್ತೆ ಸೋತಿದೆ. ಶನಿವಾರದ ಪೆಟ್ರೋಲ್(Petrol) ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್(Diesel) ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ.

ಇತ್ತೀಚಿನ ದಿನಗಳಲ್ಲಿ ಮೋದಿ ಸರಕಾರ ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ಪ್ರತಿ ಲೀಟರ್‌ಗೆ ಒಮ್ಮೆಗೆ ಸುಮಾರು 3 ರೂ.ಗಳಷ್ಟು ದರಗಳನ್ನು ಹೆಚ್ಚಿಸಿದ್ದವು. ಇತ್ತೀಚಿನ ಈ ಪರಿಷ್ಕರಣೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.77 ರೂ.ಗಳಿಂದ 98.64 ರೂ.ಗಳಿಗೆ ತಲುಪಿದೆ.






