June 13, 2026
kasargod-suicide

ಕಾಸರಗೋಡು : ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ನವವಿವಾಹಿತೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಲಂನಲ್ಲಿ ನಡೆದಿದೆ. ಚಿನ್ನದ ಆಭರಣಗಳಿಗಾಗಿ ಪತಿಯ ಕುಟುಂಬದವರು ನೀಡುತ್ತಿದ್ದ ಸರಣಿ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.ಮೂಲತಃ ಬದಿಯಡ್ಕದ ಚೆರ್ಲಡುಕ್ಕಂ ನಿವಾಸಿಯಾದ ಫಾತಿಮತ್ ಸುಫೈದಾ (24) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಆದಿಲ್‌ನನ್ನು ವಿದ್ಯಾನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

About The Author

Leave a Reply