

ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಿಗದಿಯಾಗಿದೆ. ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂಲಕವೇ ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ. ಜೂನ್ 5, 6 ಅಥವಾ 7 ರಂದು ನೂತನ ಸಿಎಂ ಪದಗ್ರಹಣಕ್ಕೆ ಜ್ಯೋತಿಷಿ ದ್ವಾರಕನಾಥ್ ಅವರಿಂದ ಶುಭ ಮುಹೂರ್ತ ನಿಗದಿಯಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಇಡೀ ರಾಜ್ಯ ಕಾತುರದಿಂದ ಕಾಯುತ್ತಿದೆ. ರಾಜೀನಾಮೆ ಘೊಷಿಸಿದ ನಂತರ, ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಕುರ್ಚಿ ಏರಲಿದ್ದಾರೆ ಎಂದು ಸಿದ್ದರಾಮಯ್ಯ ಸುಳಿವು ನೀಡಿದ್ದರು. ಅದರಂತೆಯೇ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ಮುಖ್ಯಮಂತ್ರಿಯಾಗಿ ಯಾರು ರಾಜ್ಯಭಾರ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ತೆರೆ ಬೀಳಲಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣವಚನದ ಮುಹೂರ್ತವೂ ಸಹ ಇಂದು ಫಿಕ್ಸ್ ಆಗಲಿದೆ







