June 4, 2026
News-11-ksrtc

ಬೆಂಗಳೂರು : ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ನಾಡಿನ ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ವಿಧಾನಸೌಧದಲ್ಲಿ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್, ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. “ರಾಜ್ಯದಲ್ಲಿ ಹೊಸ ಯುಗವನ್ನು ಆರಂಭಿಸುವ ನಿಟ್ಟಿನಲ್ಲಿ, ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೆಲವು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.“ರಾಜ್ಯದಲ್ಲಿ ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವಿದೆ. ಆದರೆ ಇನ್ಮುಂದೆ ವಿದ್ಯಾರ್ಥಿನಿಯರಂತೆಯೇ ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೂ (ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಬ್ಬರಿಗೂ) ಉಚಿತ ಬಸ್ ಪಾಸ್ ನೀಡಲಾಗುವುದು. ಪ್ರಸ್ತುತ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವುದರಿಂದ, ಶೀಘ್ರದಲ್ಲೇ ಈ ಉಚಿತ ಬಸ್ ಪಾಸ್ ವಿತರಣೆಗಾಗಿ ಇಲಾಖೆಯಿಂದ ಅಧಿಕೃತ ಅರ್ಜಿಗಳನ್ನು ಆಹ್ವಾನಿಸಲಾಗುವುದು” ಎಂದು ಸಿಎಂ ಸ್ಪಷ್ಟಪಡಿಸಿದರು.ರಾಜ್ಯದ ಗ್ರಾಮೀಣ ಭಾಗದ ಯುವಕರಲ್ಲಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ರಚನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ತಿಳಿಸಿದರು. ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕ ಸಂಘಗಳನ್ನು ರಚಿಸುವ ಗುರಿ ಹೊಂದಲಾಗಿದ್ದು, ಈ ಯೋಜನೆಯಡಿ ಪ್ರತಿ ಸಂಘಕ್ಕೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿಗಳ ಬೃಹತ್ ಅನುದಾನ ನೀಡಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದರು.ಇದೇ ವೇಳೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಹತ್ತರ ನಿರ್ಧಾರ ಪ್ರಕಟಿಸಿದ ಸಿಎಂ, “ಇದುವರೆಗೆ ಕೇವಲ ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ‘ಬಿ’ ಖಾತಾದಿಂದ ‘ಎ’ ಖಾತೆ ಮಾಡುವ ಯೋಜನೆಯನ್ನು ಇನ್ಮುಂದೆ ಇಡೀ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ರಾಜ್ಯದಾದ್ಯಂತ ಇರುವ ಅನಧಿಕೃತ ಕಟ್ಟಡಗಳಿಗೆ ಕಾನೂನು ಚೌಕಟ್ಟಿನಲ್ಲಿ ‘ಎ-ಖಾತಾ’ ದಾಖಲೆಗಳನ್ನು ನೀಡುವ ವಿಶೇಷ ಅಭಿಯಾನವನ್ನು ನಾವು ಹಮ್ಮಿಕೊಳ್ಳಲಿದ್ದೇವೆ” ಎಂದು ಮಾಹಿತಿ ನೀಡಿದರು.ಮೊದಲ ಸಚಿವ ಸಂಪುಟದ ಘೋಷಣೆಗಳುಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಪ್ರೈವೇಟ್ ಎಂಪ್ಲೋಮೆಂಟ್ ಎಕ್ಸ್ಚೇಂಜ್ ಸೆಂಟರ್ ಸ್ಥಾಪನೆ.

About The Author

Leave a Reply