June 5, 2026
05-06-26-TA-POWER

ಮಂಗಳೂರು: ಹೊಸ ಕಟ್ಟಡವೊಂದರ ನಾಲ್ಕನೆ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರೊಬ್ಬರು ಮೃತಪಟ್ಟ ಘಟನೆ ಮಂಗಳೂರು ಪದವಿನಂಗಡಿ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ ಪೂಜಾರಿ (45) ಎಂದು ಗುರುತಿಸಲಾಗಿದೆ.ಉಳ್ಳಾಲ ಧರ್ಮನಗರ ನಿವಾಸಿಯಾಗಿದ್ದ ಸಂತೋಷ್ ಪೂಜಾರಿ ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರೂ ಆಗಿದ್ದರು. ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸಂತೋಷ್ ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಸಂತೋಷ್‌ರ ತಲೆಗೆ ತೀವ್ರ ಏಟು ಬಿದ್ದಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಸಂತೋಷ್ ಈ ಹಿಂದೆ ವಿದೇಶದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಊರಿಗೆ ಮರಳಿದ ಬಳಿಕ ಉಳ್ಳಾಲ ಬೈಲನಲ್ಲಿ ಸ್ವಂತ ವೆಲ್ಡಿಂಗ್ ಶಾಪ್ ತೆರೆದಿದ್ದರು. ಸಂತೋಷ್ ವಿವಾಹಿತರಾಗಿದ್ದು, ಪತ್ನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply