June 7, 2026
lpg

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ದರ ದುಬಾರಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.ಈ ದಿಢೀರ್ ಬೆಲೆ ಏರಿಕೆಯಿಂದಾಗಿ ದೇಶದ ರಾಜಧಾನಿ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್ ದರವು 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಜೂನ್ 7ರಿಂದಲೇ ಈ ಪರಿಷ್ಕೃತ ದರ ದೇಶಾದ್ಯಂತ ಜಾರಿಗೆ ಬರಲಿದ್ದು, ಸ್ಥಳೀಯ ತೆರಿಗೆಗಳು (ಲೋಕಲ್ ಟ್ಯಾಕ್ಸ್) ಮತ್ತು ಸಾಗಾಣಿಕೆ ವೆಚ್ಚಗಳ ಆಧಾರದ ಮೇಲೆ ಬೇರೆ ಬೇರೆ ನಗರಗಳಲ್ಲಿ ಚಿಲ್ಲರೆ ಮಾರಾಟ ದರದಲ್ಲಿ ವ್ಯತ್ಯಾಸವಿರಲಿದೆ.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿರುವುದೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ, ಇದೇ ಇಂಧನ ಪೂರೈಕೆ ಬಿಕ್ಕಟ್ಟಿನ ಕಾರಣದಿಂದಾಗಿ ಕಳೆದ ಮಾರ್ಚ್ 7ರಂದು ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರಿ ಪ್ರಮಾಣದಲ್ಲಿ ಅಂದರೆ 60 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.

About The Author

Leave a Reply