

ಶಾಲಾ ವಾಹನ ಹರಿದು ತಾಯಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಬೆಂಗಳೂರಿನ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುವಾಗ ಈ ವೇಳೆ ಬೈಕ್ ಸ್ಕಿಡ್ ಆಗಿ ತಾಯಿ ಕಾಂತ ರಸ್ತೆಯಲ್ಲಿ ಬಿದ್ದಿದ್ದಾರೆ.
ಈ ವೇಳೆ ಶಾಲಾ ವಾಹನ ಏಕಾಏಕಿ ಕಾಂತ ಅವರ ಮೇಲೆ ಹರಿದಿದೆ. ಘಟನೆಯಲ್ಲಿ ತಾಯಿ ಕಾಂತ ಸ್ಥಳದಲ್ಲಿ ಸಾವನ್ನಪ್ಪಿದ್ದು ಪುತ್ರಿ ನೇಹ ಬಚಾವ್ ಆಗಿದ್ದಾಳೆ. ಬೈಕ್ ನಲ್ಲಿ ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಮಾರತಹಳ್ಳಿಯಿಂದ ಸಿದ್ದಾಪುರ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ತಾಯಿಯ ಸಾವನ್ನು ಕಣ್ಣಾರೆ ಕಂಡ ನೇಹಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಬಗ್ಗೆ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






