June 14, 2026
school-shoe

ಬೆಂಗಳೂರು: ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ-ಸಾಕ್ಸ್ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾದಗಿದ್ದು, ವಾತಾವರಣಕ್ಕೆ ತಕ್ಕಂತೆ ಮಕ್ಕಳಿಗೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ ನಡೆಸಿದೆ. ಯಾವೆಲ್ಲ ಪ್ರದೇಶಗಳಲ್ಲಿ ಮಕ್ಕಳಿಗೆ ಶೂ ಅಥವಾ ಚಪ್ಪಲಿ ಸೂಕ್ತ ಎಂಬ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿಯನ್ನೂ ಕೇಳಲಾಗಿದೆ.ಮಳೆ ಮತ್ತು ಬೇಸಿಗೆ ಕಾಲಗಳೆರಡರಲ್ಲೂ ಚಪ್ಪಲಿಯನ್ನು ಧರಿಸೋದು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ. ಅಲ್ಲದೆ ದೀರ್ಘ ಕಾಲ ಶೂ ಧರಿಸೋದು ವಿವಿಧ ಸೋಂಕುಗಳಿಗೂ ಕಾರಣವಾಗಬಹುದು. ಜೊತೆಗೆ ಮಳೆಗಾಲದಲ್ಲಿ ಸಾಕ್ಸ್ ಒದ್ದೆಯಾಗಿ ವಾಸನೆ ಬರುವ ಸಾಧ್ಯತೆಯೂ ಹೆಚ್ಚಿರಲಿದೆ. ಈ ಎಲ್ಲ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಚಪ್ಪಲಿ ವಿತರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪ್ರತಿ ವರ್ಷ ಶಿಕ್ಷಣ ಇಲಾಖೆಯಿಂದ ಒಂದು ಜೊತೆ ಶೂ ಮತ್ತು ಎರಡು ಜತೆ ಸಾಕ್ಸ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕಳೆದ ವರ್ಷ ಒಂದರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರೂ.ಗಳನ್ನು ಸರ್ಕಾರ ನಿಗದಿ ಮಾಡಿತ್ತು.

About The Author

Leave a Reply