June 16, 2026
aciident

ಉಡುಪಿ: ಶಾಲಾ ಬಸ್ ಚಾಲಕನೊಬ್ಬ ಚಾಲನೆ ಮಾಡುವಾಗ ಹಠಾತ್ ಹೃದಯಾಘಾತ ಉಂಟಾಗಿ , ರಸ್ತೆ ಮಧ್ಯೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಬೆಳಗ್ಗೆ ಮಣಿಪಾಲದಲ್ಲಿ ನಡೆದಿದೆ.ಚಾಲಕ ನಿಯಂತ್ರಣ ಕಳೆದುಕೊಳ್ಳುವ ಮೊದಲು ವಾಹನವನ್ನು ಸುರಕ್ಷಿತವಾಗಿ ಚಲಾಯಿಸುವಲ್ಲಿ ಯಶಸ್ವಿಯಾದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಎಂದು ಗುರುತಿಸಲಾಗಿದೆ.ಕೂಡಲೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದರು. ಆದರೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸಂಭವಿಸಬಹುದಾಗಿದ್ದ ಭಾರಿ ಅನಾಹುತ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.ಸ್ಥಳೀಯ ನಿವಾಸಿಗಳು ಮತ್ತು ಶಾಲಾ ಸಿಬ್ಬಂದಿ ತಕ್ಷಣ ಚಾಲಕನಿಗೆ ಸಹಾಯ ಮಾಡಲು ಧಾವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು. ವೈದ್ಯರು ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

About The Author

Leave a Reply