July 13, 2026
IMG-20260620-WA0079

ಕುಂಬಳೆ: ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ನಡೆದಿದೆ. ಬೇಳ ಕೊಳಂಬೆ ಯ ಫ್ರಾನ್ಸಿಸ್ ಡಿ’ಸೋಜ (47) ಮೃತರು.ನಾಯ್ಕಾಪು ಮುಂಜಾಂಗಾವು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಫ್ರಾನ್ಸಿಸ್ ರವರನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply