June 22, 2026
image-9

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನ್ಯಾಯಾಲಯದ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯದಲ್ಲಿ, ಕೋರ್ಟ್ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

ಬೆದರಿಕೆ ಸಂದೇಶದ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ.

About The Author

Leave a Reply