June 23, 2026
image-16

ಬೆಂಗಳೂರು: ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ ಎಂದು ಹೇಳಿರುವ ಸಿಎಂ ಡಿಕೆ ಶಿವಕುಮಾರ್ ಹೊಸಬರಿಗೆ ಮಣೆ ಹಾಕುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ” ಎಂದು ತಿಳಿಸಿದ್ದಾರೆ.”ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್ ವಹಿಸಿಕೊಂಡಿದೆ. ಈಗಾಗಲೇ ನವದೆಹಲಿಯಲ್ಲಿ ಈ ಕುರಿತು ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ” ಎಂದಿದ್ದಾರೆ.

About The Author

Leave a Reply