June 25, 2026
WhatsApp Image 2026-06-25 at 10.26.17 AM

ಬೆಂಗಳೂರು: ಕರ್ನಾಟಕ ಅನಿವಾಸಿ ಒಕ್ಕೂಟದ ವತಿಯಿಂದ ಎನ್‌ಆರ್‌ಐ ಸಚಿವಾಲಯವನ್ನು ತಕ್ಷಣ ಜಾರಿಗೆ ತರಬೇಕು ಹಾಗೂ ಡಾ. ಆರತಿ ಕೃಷ್ಣ ಅವರನ್ನು ಎನ್‌ಆರ್‌ಐ ಸಚಿವರಾಗಿ ನೇಮಕ ಮಾಡಬೇಕೆಂಬ ಆಗ್ರಹದೊಂದಿಗೆ ಜೂನ್ 26, ಶುಕ್ರವಾರ ಜಾಗತಿಕ ಮಟ್ಟದಲ್ಲಿ ಟ್ವಿಟರ್ (X) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವದಾದ್ಯಂತ ನೆಲೆಸಿರುವ ಲಕ್ಷಾಂತರ ಅನಿವಾಸಿ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಧ್ವನಿಯನ್ನು ಸರ್ಕಾರದ ಗಮನಕ್ಕೆ ತಲುಪಿಸುವಂತೆ ಒಕ್ಕೂಟ ಮನವಿ ಮಾಡಿದೆ.

ಈ ಅಭಿಯಾನದ ಮೂಲಕ ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಸಮಸ್ಯೆಗಳು, ಹಕ್ಕುಗಳು ಹಾಗೂ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿ ಪ್ರತ್ಯೇಕ ಎನ್‌ಆರ್‌ಐ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಎನ್‌ಆರ್‌ಐ ಸಮುದಾಯದ ಪರವಾಗಿ ಕಾರ್ಯನಿರ್ವಹಿಸಿರುವ ಡಾ. ಆರತಿ ಕೃಷ್ಣ ಅವರಿಗೆ ಎನ್‌ಆರ್‌ಐ ಸಚಿವರ ಜವಾಬ್ದಾರಿಯನ್ನು ನೀಡಬೇಕೆಂದು ಆಗ್ರಹಿಸಲಾಗಿದೆ.

ಜೂನ್ 26ರಂದು ಸಂಜೆ 6 ಗಂಟೆಗೆ (ಭಾರತೀಯ ಕಾಲಮಾನ) ನಡೆಯಲಿರುವ ಈ ಅಭಿಯಾನದಲ್ಲಿ ವಿಶ್ವದಾದ್ಯಂತ ಇರುವ ಅನಿವಾಸಿ ಕನ್ನಡಿಗರು ಹಾಗೂ ಕನ್ನಡಾಭಿಮಾನಿಗಳು ಟ್ವಿಟರ್ (X) ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸುವಂತೆ ಕರ್ನಾಟಕ ಅನಿವಾಸಿ ಒಕ್ಕೂಟ ಕೋರಿದೆ.

About The Author

Leave a Reply