

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54 )ಬಂಧಿತ ಆರೋಪಿ.
ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಈ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ 300 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






