July 1, 2026
WhatsApp Image 2026-07-01 at 9.26.04 AM

ಮಂಗಳೂರು ಕಂಕನಾಡಿ ಸಮೀಪ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟ ದುರ್ಘಟನೆ ಅತ್ಯಂತ ವಿಷಾದನೀಯವಾಗಿದೆ. ಈ ದುರಂತಕ್ಕೆ ಸಚಿವ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆಯ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಸಚಿವರು, ಈ ದುಃಖದ ಸುದ್ದಿ ತಿಳಿದ ತಕ್ಷಣ ಮಂಗಳೂರು ಕಡೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಬಳಿ ಮಾತನಾಡಿರುವ ಸಚಿವ ಖಾದರ್ ಗಾಯಾಳುಗಳ ಚಿಕಿತ್ಸೆಗೆ ಸರಕಾರದಿಂದಲೇ ವೆಚ್ಚ ಭರಿಸಲು,ಮೃತಪಟ್ಟ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಸೂಚನೆ ನೀಡಿದ್ದಾರೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಮನೆಯಲ್ಲಿ ಸಿಲುಕಿರುವ ಮೃತದೇಹಗಳನ್ನು ಮೇಲಕ್ಕೆತ್ತುವ ಕಾರ್ಯವೂ ಮುಂದುವರಿದಿದೆ.

About The Author

Leave a Reply