

ಬೆಂಗಳೂರು: ಮೌಲ್ವಿಗಳನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.






