July 4, 2026
WhatsApp Image 2026-07-03 at 3.08.28 PM

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪಕ್ಕೆ ತಿರುಗುತ್ತಿದೆ. ಮಳೆಯಿಲ್ಲದೆ ರಾಜ್ಯದ ಬಹುತೇಕ ಪ್ರಮುಖ ಅಣೆಕಟ್ಟುಗಳಿಗೆ ಹರಿದುಬರುತ್ತಿದ್ದ ನೀರಿನ ಪ್ರಮಾಣ (ಒಳಹರಿವು) ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಶೂನ್ಯಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳ ನೀರನ್ನು ನಂಬಿಕೊಂಡು ರೈತರು ಯಾವುದೇ ಕಾರಣಕ್ಕೂ ಅವಸರದಲ್ಲಿ ಬೆಳೆಗಳನ್ನು ಬಿತ್ತಬಾರದು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಳಕಳಿಯ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟದ ಆತಂಕಕಾರಿ ಚಿತ್ರಣವನ್ನು ಬಿಚ್ಚಿಟ್ಟರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪರಿಸ್ಥಿತಿ ಅತ್ಯಂತ ಕಠಿಣವಾಗಿದೆ. ಉತ್ತರ ಕರ್ನಾಟಕದ ಪ್ರಮುಖ ಜೀವನದಿಗಳಾದ ತುಂಗಭದ್ರಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ನಾರಾಯಣಪುರ ಹಾಗೂ ವಾಣಿವಿಲಾಸ ಅಣೆಕಟ್ಟುಗಳಿಗೆ ಸದ್ಯಕ್ಕೆ ಯಾವುದೇ ನೀರಿನ ಒಳಹರಿವು ಇಲ್ಲದೆ ಶೂನ್ಯಕ್ಕೆ ಕುಸಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

About The Author

Leave a Reply