July 10, 2026
WhatsApp Image 2026-07-10 at 10.49.30 AM

ಉಡುಪಿ: ಜಿಲ್ಲೆಯ ಮಣಿಪಾಲ ಸರಳಬೆಟ್ಟು‌‌ ಸಮೀಪ ನಡೆದ ದುರ್ಘಟನೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ನಡೆದ ಈ ಅಪಘಾತದಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಶಾಲಾ ವಾಹನಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply