July 13, 2026
WhatsApp Image 2026-07-13 at 4.06.07 PM

ಬಕ್ರೀದ್ ಹಬ್ಬದ ಮುನ್ನಾದಿನದಂದು ತಮಿಳುನಾಡು ರಾಜ್ಯಾದ್ಯಂತ ಹಸು ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್(Supreme Court) ಇಂದು ಮಧ್ಯಂತರ ತಡೆ ನೀಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಸೃಷ್ಟಿಯಾಗಿದ್ದ ದೊಡ್ಡ ಆಡಳಿತಾತ್ಮಕ ಮತ್ತು ಕಾನೂನು ಗೊಂದಲಕ್ಕೆ ಸದ್ಯ ತೆರೆ ಬಿದ್ದಿದೆ.

ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯ (SLP) ಪರವಾಗಿ ದೇಶದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದ ಮಂಡಿಸಿದರು.

ಕಾನೂನು ಚೌಕಟ್ಟು ಮೀರಿದ ಆದೇಶ: ಹೈಕೋರ್ಟ್ ಆದೇಶವು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ‘1958ರ ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ’ಗೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸರ್ಕಾರ ವಾದಿಸಿತು. ಈ ಕಾನೂನಿನ ಪ್ರಕಾರ, 10 ವರ್ಷಕ್ಕಿಂತ ಮೇಲ್ಪಟ್ಟ, ಕೃಷಿ ಕೆಲಸಕ್ಕೆ ಹಾಗೂ ಸಂತಾನೋತ್ಪತ್ತಿಗೆ ಅನರ್ಹವಾದ ಹಸುಗಳನ್ನು ಸಕ್ಷಮ ಪ್ರಾಧಿಕಾರದ ಪ್ರಮಾಣಪತ್ರ ಪಡೆದು ನಿರ್ದಿಷ್ಟ ಕಸಾಯಿಖಾನೆಗಳಲ್ಲಿ ವಧೆ ಮಾಡಲು ಅವಕಾಶವಿದೆ.

ನ್ಯಾಯಾಂಗವೇ ಕಾನೂನು ರಚಿಸಲು ಸಾಧ್ಯವಿಲ್ಲ: ಶಾಸನಬದ್ಧ ಕಾನೂನು ಕೆಲವು ವಿನಾಯಿತಿಗಳನ್ನು ನೀಡಿರುವಾಗ, ಹೈಕೋರ್ಟ್ ಅದನ್ನೆಲ್ಲಾ ಮೀರಿ ‘ಸಂಪೂರ್ಣ ನಿಷೇಧ’ ಹೇರುವ ಮೂಲಕ ಶಾಸಕಾಂಗದ ಕೆಲಸವನ್ನು ತಾನೇ ಮಾಡಲು ಹೊರಟಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪಿಸಿತ್ತು.

About The Author

Leave a Reply