

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.
ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.






