

ಬಂಟ್ವಾಳ: ನಿನ್ನೆ ನಡೆದ ದುರ್ಘಟನೆಯಲ್ಲಿ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಇಂದು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.


ಈ ವೇಳೆ ಲಾವಣ್ಯ ಅವರ ಕುಟುಂಬದ ಸದಸ್ಯರನ್ನು ಭೇಟಿಯಾಗಿ ತೀವ್ರ ಸಂತಾಪ ಸೂಚಿಸಿದ ಅವರು, ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ತಪ್ಪಿತಸ್ಥನ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಸಾಂತ್ವನ ಹೇಳಿದರು.





