July 20, 2026
WhatsApp Image 2026-07-16 at 8.12.02 PM

ಬಿ.ಸಿ.ರೋಡ್‌: ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಹತ್ಯೆ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ವೇಳೆ, ತಾನು ಇಲಿಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದ. ಪೊಲೀಸರು ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾ ಆಸ್ಪತ್ರೆಯ ವೈದ್ಯರು ನೀಡಿರುವ ವೈದ್ಯಕೀಯ ಸಲಹೆಯಂತೆ, ವಿಷ ಸೇವನೆಯ ಹಿನ್ನೆಲೆಯಲ್ಲಿ ಆರೋಪಿ ಯನ್ನು ಸುಮಾರು ಐದು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿಟ್ಟು ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.ಆರೋಪಿಯ ಆರೋಗ್ಯ ಸ್ಥಿತಿ ಚಿಕಿತ್ಸೆಗೆ ಅನುಕೂಲಕರವಾಗಿದೆ ಎಂದು ವೈದ್ಯರು ಪ್ರಮಾಣೀಕರಿಸಿದ ಬಳಿಕ, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಾನೂನು ಪ್ರಕ್ರಿಯೆ ಅನುಸರಿಸಲಾಗುತ್ತದೆ. ಸದ್ಯ ಆರೋಪಿಯ ಭದ್ರತೆಗೆ ಆಸ್ಪತ್ರೆಯಲ್ಲಿ ಪೊಲೀಸ್ ಬಂದೋಬಸ್ತ್ ಕಲಿಸಲಾಗಿದೆ ಎಂದು ತಿಳಿದುಬಂದಿದೆ.

About The Author

Leave a Reply