

ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದು ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ. ಗಾಯಾಳುಗಳನ್ನು ವಾಹನ ಚಾಲಕ ಶಿರ್ವದ ಬಾಲಕೃಷ್ಣ (21) ಹಾಗೂ ಇಬ್ಬರು ಯುವತಿಯರು ಸೇರಿದಂತೆ ಮೂವರು ಸಹ ಪ್ರಯಾಣಿಕರು ಎಂದು ಗುರುತಿಸಲಾಗಿದೆ.

ನಾಲ್ವರಿಗೂ ಗಾಯಗಳಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರ್ವ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






