

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿ ಹನುಮಂತ (27) ಮಣಿಪಾಲದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜುಲೈ 18ರ ರಾತ್ರಿ 10:30 ಗಂಟೆಯಿಂದ ಜುಲೈ 19ರ ಬೆಳಿಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ, ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯೊಳಗಿನ ಕಬ್ಬಿಣದ ರಾಡಿಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.






