September 15, 2026
WhatsApp Image 2026-08-01 at 4.54.17 PM

ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ.

ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ ಡೆರಿಕ್ ತಲೆಮರೆಸಿಕೊಂಡಿದ್ದ.

ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಶನಿವಾರ ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ತನಿಖೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ

About The Author

Leave a Reply