

ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಜಾರಿ ಬಿದ್ದು 16 ವರ್ಷದ ಯುವಕ ನಿಯಾಸ್ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಹೊಳಮಾಳದಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ನಿಯಾಸ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.







