August 4, 2026
WhatsApp Image 2026-08-04 at 1.13.54 PM

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಂತ್ರಿಗಿರಿ ಸಿಗದಿದ್ದಕ್ಕೆ ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ. ಮಂತ್ರಿ ಸ್ಥಾನ ಸಿಗದಕ್ಕೆ ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಬೆದರಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಕರೆ ಮಾಡಿದೆ. 

ರಾಜೀನಾಮೆ ಬೆದರಿಕೆ ಹಾಕಿದವರ ವಿವರಣೆ ಕೇಳಿದ್ದು ಸಚಿವ ಸ್ಥಾನ ಸಿಗದಿದ್ದವರಿಗೆ ನಿಗಮ ಮಂಡಳಿ ಸ್ಥಾನ ಕೊಡುತ್ತೇವೆ ಅದನ್ನು ಮೀರಿ ರಾಜೀನಾಮೆ ನೀಡಿದರೆ ಅಂತಹ ಶಾಸಕರ ರಾಜೀನಾಮೆ ಅಂಗೀಕರಿಸಲು ಸೂಚನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಿನಾಮೆ ನೀಡಿದರೆ ತಕ್ಷಣ ಅಂಗೀಕರಿಸುತ್ತೇವೆ ಎನ್ನುವ ಮೂಲಕ ರಾಜಿನಾಮೆ ಬೆದರಿಕೆ ಹಾಕಿದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

About The Author

Leave a Reply