August 18, 2026
WhatsApp Image 2026-08-18 at 9.19.30 AM

ಬಂಟ್ವಾಳ ಸಮೀಪ ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಕಟ್ಟಿ, ಕೈಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನದ ಬಳೆಗಳನ್ನು ಬಲಾತ್ಕಾರವಾಗಿ ಎಳೆದು ಸುಲಿಗೆ ಮಾಡಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಕೃತ್ಯವೆಸಗಿದ ವೃದ್ಧೆಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ.ಬಂಟ್ವಾಳ ತೆಂಕ ಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಅವ್ವಮ್ಮ (82) ಎಂಬವರು ಆ.14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ವ್ಯಕ್ತಿಯೋರ್ವ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ಬಂದು ಅವ್ವಮ್ಮ ಅವರ ಕೈಗಳಲ್ಲಿದ್ದ ಸುಮಾರು 5 ಲಕ್ಷ ರೂ ಮೌಲ್ಯದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿರುವುದು ಮತ್ತು ಈ ಸಂದರ್ಭ ಅವ್ವಮ್ಮ ಅವರ ಕೈಗೆ ಗಾಯವಾಗಿದ್ದ ಕುರಿತು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ವೇಳೆ ಅವ್ವಮ್ಮ ಅವರ ಮೊಮ್ಮಗ ಶಬೀರ್ ಆರೋಪಿ ಎಂದು ತಿಳಿದುಬಂದಿದ್ದು, ಆತನಿಂದ ಎರಡು ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

About The Author

Leave a Reply