August 19, 2026
WhatsApp Image 2026-08-19 at 10.42.07 AM

ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ.

ಆ.15ರಂದು ಅಪ್ರಾಪ್ತ ಬಾಲಕನೊಬ್ಬ ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply