August 20, 2026
20-08-26-ta-bus

ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ಟೋಲ್ ಸಮೀಪ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

About The Author

Leave a Reply