September 17, 2026
WhatsApp Image 2026-08-26 at 4.06.43 PM

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆಗೆ ದರ್ಬೆ ವೃತ್ತವನ್ನು ದಾಟಿ ಸೇಂಟ್ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ದಿಢೀರ್ ಬ್ರೇಕ್ ವೈಫಲ್ಯಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಸಮೀಪದ ಮನೆಯೊಂದರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಹಾಗೂ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ನಂತರ ರಸ್ತೆಗೆ ಅಡ್ಡಲಾಗಿ ನಿಂತಿದ್ದ ಬಸ್ಸನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಲಾಯಿತು

About The Author

Leave a Reply