

7ನೇ ಮಹಡಿಯಿಂದ ಪ್ರೇಮಿಗಳು ಇಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಘಟನೆಯಲ್ಲಿ ಪ್ರಿಯತಮೆ ಸ್ಥಳದಲ್ಲೆ ಸಾವನ್ನಪ್ಪಿದ್ದು ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ವೈಟ್ ಫೀಲ್ಡ್ ನ ಕೋ ಲಿವಿಂಗ್ ಪಿಜಿಯಲ್ಲಿ ಈ ಒಂದು ಘಟನೆ ನಡೆದಿದೆ.
ಪುದುಚೇರಿ ಮೂಲದ ಯುವತಿ ಜನನಿ ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಪ್ರಿಯಕರ ಮಾಣಿಕ್ಯ ವೇಲು ಸ್ಥಿತಿ ಗಂಭೀರವಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೃತ್ತಿಯಲ್ಲಿ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು. ಕಳೆದ ಒಂದು ತಿಂಗಳಿಂದ jananib ಮಾಣಿಕ್ಯ ವೇಲು ಒಂದೇ ಪಿಜಿಯಲ್ಲಿ ವಾಸಿಸುತ್ತಿದ್ದರು. ಇದ್ದಕ್ಕಿದ್ದಂತೆ ಕಟ್ಟಡದಿಂದ ಮಾಣಿಕ್ಯ ವೇಲು ಮತ್ತು ಜನನಿ ಜಿಗಿದಿದ್ದಾರೆ. ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






