

ಕಾಸರಗೋಡು : ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಧ್ವಜಸ್ತಂಭಕ್ಕೆ ಕಟ್ಟಿದ್ದ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿಕೊಂಡ ಪರಿಣಾಮ 11 ವರ್ಷದ ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನ ಮಡಿಕೈ ಸಮೀಪದ ಕಂಜಿಪೊಯಿಲ್‌ನಲ್ಲಿ ಗುರುವಾರ ಸಂಜೆ ನಡೆದಿದೆ
ಮೃತ ಬಾಲಕನನ್ನು ರಾಜೇಶ್ ಹಾಗೂ ನೀತು ದಂಪತಿಯ ಪುತ್ರ ಅನೇಕ್ ಎಂದು ಗುರುತಿಸಲಾಗಿದೆ. ಕಂಜಿಪೊಯಿಲ್‌ನ ಶಾಲೆಯೊಂದರಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ಅನೇಕ್, ನಂದನಕುಳಿ ಅಂಗನವಾಡಿ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಗುರುವಾರ ಸಂಜೆ ಸುಮಾರು 5 ಗಂಟೆ ವೇಳೆಗೆ ಅನೇಕ್ ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದನು. ಈ ವೇಳೆ ಧ್ವಜಸ್ತಂಭಕ್ಕೆ ಕಟ್ಟಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿ ಬಿಗಿಯಾಗಿದೆ ಎಂದು ತಿಳಿದುಬಂದಿದೆ.






