September 5, 2026
WhatsApp Image 2026-09-05 at 9.33.44 AM

ಮಹಾರಾಷ್ಟ್ರ: ಧಾರಾಶಿವ್ ಜಿಲ್ಲೆಯ ಐತಿಹಾಸಿಕ ನಳದುರ್ಗ ಕೋಟೆಯ 100 ಅಡಿ ಆಳದ ಕಂದಕಕ್ಕೆ ರಾಷ್ಟ್ರೀಯ ಮಟ್ಟದ ಮಹಿಳಾ ಕುಸ್ತಿಪಟುವೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಲ್ಲಿ ಕುಸ್ತಿಪಟು ಹಾಗೂ ಆಕೆಯ ಇಬ್ಬರು ಮಕ್ಕಳು ಮೃತಪಟ್ಟಿದ್ದು ಮತ್ತೋರ್ವ ಮಗಳು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೃತ ಕುಸ್ತಿಪಟುವನ್ನು ಅಶ್ವಿನ್ ಮನೋಹರ್ ಪೌಲ್ ಎಂದು ಗುರುತಿಸಲಾಗಿದ್ದು, ಆಕೆಯ ಐದೂವರೆ ವರ್ಷದ ಮಗ ಅಜಿಂಕ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆಕೆಯ ಎರಡುವರೆ ವರ್ಷದ ಅವಳಿ ಹೆಣ್ಣು ಮಕ್ಕಳಲ್ಲಿ ಒಬ್ಬಳಾದ ಕ್ರಾಂತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮತ್ತೊಬ್ಬ ಮಗಳಾದ ವೀರಾ ತೀವ್ರವಾಗಿ ಗಾಯಗೊಂಡಿದ್ದು, ಧಾರಾಶಿವ್ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಈ ದುರಂತ ಘಟನೆಯು ಮಹಾರಾಷ್ಟ್ರದಾದ್ಯಂತ ಹಾಗೂ ಕ್ರೀಡಾ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕವನ್ನು ಉಂಟುಮಾಡಿದೆ. ಪತಿ ಮತ್ತು ಅತ್ತೆ-ಮಾವಂದಿರಿಂದ ನಿರಂತರವಾಗಿ ಎದುರಿಸುತ್ತಿದ್ದ ಮಾನಸಿಕ ಹಾಗೂ ದೈಹಿಕ ಕಿರುಕುಳವೇ ಈ ಕಠಿಣ ನಿರ್ಧಾರಕ್ಕೆ ಕಾರಣ ಎಂದು ಅಶ್ವಿನ್ ಅವರ ತಂದೆ ಆರೋಪಿಸಿದ್ದಾರೆ. ನಳದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply